ಅಂತೂ ಇಂತೂ ಅಧಿಕೃತವಾಗಿ ‘ರಾಮಾಯಣ’ ಸಿನಿಮಾ ಘೋಷಣೆ ಆಗಿದೆ. ರಾಕಿಂಗ್ ಸ್ಟಾರ್ ಯಶ್ ಚಿತ್ರದ ಸಹ ನಿರ್ಮಾಪಕರಾಗಿದ್ದು ರಾವಣನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಶ್ರೀರಾಮನಾಗಿ ರಣ್‌ಬೀರ್ ಕಪೂರ್, ಸೀತಾಮಾತೆಯಾಗಿ ಸಾಯಿ ಪಲ್ಲವಿ ಬಣ್ಣ ಹಚ್ಚಿದ್ದಾರೆ. ಎರಡು ಭಾಗಗಳಾಗಿ ಸಿನಿಮಾ ತೆರೆಗೆ ಬರಲಿದೆ. ಬಿಡುಗಡೆ ದಿನಾಂಕ ಕೂಡ ನಿಗದಿಯಾಗಿದೆ.
ಬಹಳ ದಿನಗಳಿಂದ ‘ರಾಮಾಯಣ’ ಚಿತ್ರದ ಬಗ್ಗೆ ಚರ್ಚೆ ನಡೆಯುತ್ತಿತ್ತು. ಸದ್ದಿಲ್ಲದೇ ಸಿನಿಮಾ ಚಿತ್ರೀಕರಣ ಶುರುವಾಗಿದೆ ಎನ್ನಲಾಗಿತ್ತು. ಆದರೆ ಅಧಿಕೃತವಾಗಿ ಮಾಹಿತಿ ಸಿಕ್ಕಿರಲಿಲ್ಲ. ಎಲ್ಲಾ ಅಂತೆ ಕಂತೆ ಸುದ್ದಿ ಆಗಿತ್ತು. ಆದರೆ ಇತ್ತೀಚೆಗೆ ನಟ ಯಶ್ ಮಾತನಾಡಿ ಖಚಿತಪಡಿಸಿದ್ದರು. ಇದೀಗ ನಿಮಿತ್ ಮಲ್ಹೋತ್ರಾ ಚಿತ್ರವನ್ನು ಘೋಷಣೆ ಮಾಡಿದ್ದಾರೆ.