ಥಗ್ ಲೈಫ್’ ಬಿಡುಗಡೆ ದಿನಾಂಕ ಘೋಷಣೆ!

ಕಮಲ್ ಹಾಸನ್ ಮತ್ತು ಮಣಿರತ್ನಂ ಅವರು 37 ವರ್ಷಗಳ ನಂತರ ‘ಥಗ್ ಲೈಫ್’ ಚಿತ್ರದೊಂದಿಗೆ ಮತ್ತೆ ಒಂದಾಗಿದ್ದಾರೆ. ಈ ಚಿತ್ರವು 2025ರ ಜೂನ್ 5ರಂದು ಪ್ರಪಂಚದಾದ್ಯಂತ ಬಿಡುಗಡೆಯಾಗಲಿದ್ದು, ಇಂದು ಕಮಲ್ ಹಾಸನ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಿಡುಗಡೆ ದಿನಾಂಕವನ್ನು ಘೋಷಿಸಲಾಯಿತು.

ರಾಜ್ ಕಮಲ್ ಫಿಲ್ಮ್ಸ್ ಇಂಟರ್‌ನ್ಯಾಷನಲ್ ಮತ್ತು ಮದ್ರಾಸ್ ಟಾಕೀಸ್ ಸಹ-ನಿರ್ಮಾಣದಲ್ಲಿ ಬರುತ್ತಿರುವ ಈ ಚಿತ್ರವನ್ನು ರೆಡ್ ಜೈಯಂಟ್ ಮೂವೀಸ್ ವಿತರಿಸಲಿದೆ‌. ಚಿತ್ರದ ತಾರಾಗಣ ಕಮಲ್ ಹಾಸನ್, ಸಿಲಂಬರಸನ್ ಟಿಆರ್, ತ್ರಿಷಾ, ಅಶೋಕ್ ಸೆಲ್ವನ್, ಐಶ್ವರ್ಯ ಲಕ್ಷ್ಮಿ, ಜೋಜು ಜಾರ್ಜ್, ಅಭಿರಾಮಿ ಮತ್ತು ನಾಸರ್ ಮತ್ತಿತರ ನಟರನ್ನು ಒಳಗೊಂಡಿದೆ. ಈ ಬಹು ನಿರೀಕ್ಷಿತ ಚಿತ್ರಕ್ಕೆ ದಿಗ್ಗಜ ಎ.ಆರ್. ರೆಹಮಾನ್ ಅವರ ಸಂಗೀತವಿದೆ.

ಈ ಚಿತ್ರದ ಕತೆ, ಚಿತ್ರಕತೆಯನ್ನು ಮಣಿರತ್ನಂ ಮತ್ತು ಕಮಲ್ ಹಾಸನ್ ಬರೆದಿದ್ದು, ಮಣಿರತ್ನಂ ನಿರ್ದೇಶನದಲ್ಲಿ ರವಿ ಆರ್ ಚಂದ್ರನ್ ಅವರ ಸಿನಿಮಾಟೋಗ್ರಫಿ, ಅನ್ಬರಿವ್ ಅವರ ಆ್ಯಕ್ಷನ್ ಕೋರಿಯಾಗ್ರಫಿ ಈ ಚಿತ್ರಕ್ಕಿದೆ.

Leave a Reply

Your email address will not be published. Required fields are marked *

error: Content is protected !!